ಹೈಕೋರ್ಟ್‍ನಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್.

46

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ತನಿಖೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‍ನ ನ್ಯಾಯಂಗ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜನವರಿ 13ರಂದು ವಿಚಾರಣಾಧೀನ ಕೋರ್ಟ್‍ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಆದರೆ ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜನವರಿ 16ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಸದ್ಯಕ್ಕೆ ಹೈಕೋರ್ಟ್ನನ ಈ ಆದೇಶದಿಂದ ಪ್ರಜ್ವಲ್ ರೇವಣ್ಣಗೆ ರಿಲೀಫ್ ಸಿಕ್ಕಿದೆ.