ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ…

64
firstsuddi

ಬೆಂಗಳೂರು : ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನೇಮಕ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಿರುವ ಕುರಿತು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.