ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ – ಚಿಕಿತ್ಸೆಯ ಬಳಿಕ ಸಾವು…?

110
First Suddi

ಮೈಸೂರು : ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ರಾಹುಲ್ (19) ಎಂದು ಗುರುತಿಸಲಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ ಹುಣಸೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಿದಿದ್ದಾರೆ. ನಂತರ ವೈದ್ಯರು ಡ್ರಿಪ್ಸ್ ಹಾಕಿ ಇಂಜೆಕ್ಷನ್, ಮಾತ್ರೆ ಕೊಟ್ಟು ಕಳುಹಿಸಿದ್ದಾರೆ. ನಿನ್ನೆ ರಾತ್ರಿ ಮನೆಗೆ ಬಂದು ಮಲಗಿದ್ದ ರಾಹುಲ್, ಬೆಳಗ್ಗೆ ಮೃತಪಟ್ಟಿದ್ದಾನೆ. ಕೂಡಲೇ ಪೋಷಕರು ಮೃತದೇಹವನ್ನು ಆಸ್ಪತ್ರೆ ಮುಂದಿಟ್ಟು, ಈ ಸಾವಿಗೆ ವೈದ್ಯರೇ ಕಾರಣ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.