ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ…

56
firstsuddi

ಮೈಸೂರು: ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ.

ರೇಣುಕಾ (17) ಮೃತ ವಿದ್ಯಾರ್ಥಿನಿ. ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ರೇಣುಕಾ, ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನೋವು ತಾಳಲಾರದೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.