ವಾಷಿಂಗ್ಟನ್ : ಭಯೋತ್ಪದನೆಗೆ ಹಣಕಾಸು ನೆರವು ನೀಡುವುದನ್ನು ತಡೆಯುವುದಲ್ಲಿ ವಿಫಲವಾಗಿರುವ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲೂ ಭಾರಿ ಮುಖಭಂಗವಾಗಿದ್ದು, ಏಷಿಯಾ ಫೆಸಿಫಿಕ್ ಗ್ರೂಪ್ ಆಫ್ ದಿ ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡಿದೆ. ಪಾಕಿಸ್ತಾನ ಸರ್ಕಾರ ಕಳೆದ ವಾರ 450 ಪುಟಗಳ ವರದಿಯೊಂದನ್ನು ಎಫ್ಎಟಿಎಫ್ಗೆ ಸಲ್ಲಿಸಿತ್ತು. ಆ ವರದಿಯಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ಸರ್ಕಾರ ತೆಗೆದುಕೊಂಡ ಕ್ರಮ ಹಾಗೂ ನಂತರ ಆದ ಬದಲಾವಣೆಯನ್ನು ಕೂಡಾ ವಿವರಿಸಲಾಗಿತ್ತು. ವರದಿಯಲ್ಲಿ ಲಷ್ಕರ್-ಇ-ತೈಬಾ/ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದನ್ನು ಉಲ್ಲೇಖ ಮಾಡಿತ್ತು. ಆದರೆ ಪಾಕಿಸ್ತಾನ ಭಯೋತ್ಪಾದನೆಗೆ ಆರ್ಥಿಕ ನೆರವು ಹಾಗೂ ಹಣಕಾಸು ನೆರವು ನೀಡುವುದನ್ನು ತಡೆಯಲು ಎಫ್ಎಟಿಎಫ್ ನಿಗಧಿಪಡಿಸಿದ್ದ 40 ಅಂಶಗಳಲ್ಲಿ ಪಾಕಿಸ್ತಾನ ಒಟ್ಟು 32ಅಂಶಗಳಲ್ಲಿ ವಿಫಲವಾಗಿದ್ದರಿಂದ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.










