ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್.

106
firstsuddi

ಮುಂಬೈ: ಭಾರತೀಯ ಮಹಿಳಾ ತಂಡದ ಕ್ಯಾಪ್ಟನ್ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ್ದಾರೆ. ಮಿಥಾಲಿ ರಾಜ್ ಅವರು ಬಿಸಿಸಿಐ, ಕಾರ್ಯದರ್ಶಿ ಜಯ್ ಶಾ ಮತ್ತು ನನ್ನ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಜೀವನದ ಎರಡನೇ ಇನ್ನಿಂಗ್ಸ್ ಗೂ ಆಶೀರ್ವಾದ ಮಾಡುವಂತೆ ಕೋರಿದ್ದಾರೆ.

ನಮ್ಮ ತಂಡ ಪ್ರತಿಭಾನ್ವಿತ ಆಟಗಾರ್ತಿಯರನ್ನು ಒಳಗೊಂಡಿದೆ. ಭಾರತೀಯ ಕ್ರಿಕೆಟ್ ನ ಭವಿಷ್ಯವು ಉಜ್ವಲವಾಗಿರುವುದರಿಂದ ನನ್ನ ಆಟದ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಮಿಥಾಲಿ ರಾಜ್ ಅವರು 1999 ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದರು. 23 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದಾರೆ. ಮಿಥಾಲಿ ರಾಜ್ ಟೀಂ ಇಂಡಿಯಾ ಪರ 12 ಟೆಸ್ಟ್ ಪಂದ್ಯಗಳನ್ನು ಆಡಿದ್ದು 699 ರನ್ ಗಳಿಸಿದ್ದಾರೆ. 232 ಏಕದಿನ ಪಂದ್ಯಗಳಿಂದ 7,805 ರನ್ ಹಾಗು ಟಿ20 ಕ್ರಿಕೆಟ್ ನಲ್ಲಿ 89 ಪಂದ್ಯಗಳಲ್ಲಿ 2,364 ರನ್ ಗಳಿಸಿದ್ದಾರೆ.