ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ – ನೆಟ್ಟಿಗರ ಪ್ರಶ್ನೆಗೆ ರಾಧಿಕಾ ಪಂಡಿತ್ ಖಡಕ್ ಉತ್ತರ…

74
firstsuddi

ಬೆಂಗಳೂರು : ನಟ ಪುನೀತ್ ರಾಜ್‍ಕುಮಾರ್ ಅವರು ನಿಧನ ಹೊಂದಿ 13 ದಿನಗಳಾದ ನಂತರ ಅವರ ಜತೆ ಇರುವ ಫೋಟೋವನ್ನು ರಾಧಿಕಾ ಪಂಡಿತ್ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಅಪ್ಪು ಸರ್ ನೀವು ಇನ್ನು ಮುಂದೆ ಇಲ್ಲ ಎಂಬುದನ್ನು ಇನ್ನೂ ನಮ್ಮ ಮನಸ್ಸು ಒಪ್ಪಿಕೊಳ್ಳುತ್ತಿಲ್ಲ. ನೀವು ಇಲ್ಲದ ಇಂಡಸ್ಟ್ರಿ ಬರಡಾಗಿದೆ. ನಿಮ್ಮೊಂದಿಗೆ ಕೆಲಸ ಮಾಡುವ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡಿದ್ದರು. ಆದರೆ ಈ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು, ಅಭಿಮಾನಿಗಳು ನೀವು ಯಾಕೆ ಅಪ್ಪು ಅಂತಿಮ ದರ್ಶನ ಮಾಡಲು ಬಂದಿಲ್ಲ ಎಂದು ಪ್ರಶ್ನಿಸಿ ಕಾಮೆಂಟ್ ಮಾಡುತ್ತಿದ್ದರು.

ಇದಕ್ಕೆ ಉತ್ತರ ನೀಡಿರುವ ರಾಧಿಕಾ, ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ದರು ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.