ಅಂಫಾನ್ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಪ.ಬಂಗಾಳಕ್ಕೆ ಕೇಂದ್ರದಿಂದ 1000 ಕೋಟಿ ಪರಿಹಾರ ಘೋಷಣೆ…

154
firstsuddi

ಕೊಲ್ಕತ್ತಾ : ಅಂಫಾನ್ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿ 1000 ಸಾವಿರ ಕೋಟಿ ಪರಿಹಾರವನ್ನು ಘೋಷಿಸಿದ್ದಾರೆ. ಅಂಫಾನ್ ಚಂಡಮಾರುತದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಈವರೆಗೆ 77 ಮಂದಿ ಮೃತಪಟ್ಟಿದ್ದು, ಹೀಗಾಗಿ ಚಂಡಮಾರುತದಿಂದ ಹಾನಿಯಾಗಿರುವ ಕೆಲವು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್ ಧಂಖರ್ ಅವರೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಿ ನಷ್ಟದ ಕುರಿತಂತೆ ಅಧಿಕಾರಿಗಳೊಂದಿಗೆ ಮಾಹಿತಿ ಕಲೆಹಾಕಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂಫಾನ್ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸದಾ ಇರುತ್ತದೆ. ಅಲ್ಲದೇ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಕೇಂದ್ರ ಸರ್ಕಾರದಿಂದ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.