ಹಾವೇರಿ: ಬಾಬಾಸಾಹೇಬ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸುವ ಮುನ್ನ ಮುಸ್ಲಿಂ ಧರ್ಮ ಸ್ವೀಕರಿಸಲು ಸಿದ್ಧತೆ ನಡೆಸಿದ್ದರು ಎಂಬ ಹೇಳಿಕೆ ಚರ್ಚೆಗೆ ಗುರಿಯಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ತಮ್ಮ ಹೇಳಿಕೆ ವಾಪಸ್ ಪಡೆದು, ಕ್ಷಮೆ ಕೋರಿದ್ದಾರೆ. ಶಿಗ್ಗಾಂವ್ ಉಪಚುನಾವಣೆ ಹಿನ್ನೆಯಲ್ಲಿ ಆದಿಜಾಂಬವ ಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರಿ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರ ಬಗ್ಗೆ ಮತ್ತು ಸಂವಿಧಾನದ ಬಗ್ಗೆ ನಮಗೆ ಅಪಾರ ಗೌರವ ಇದೆ. ಈಗ ಚುನಾವಣೆಗೆಯಿಂದ ನನ್ನ ಹೇಳಿಕೆ ಚರ್ಚೆ ಆಗುತ್ತಿದೆ. ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶ ಇಲ್ಲ. ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.










