ಅಂಬೇಡ್ಕರ್ ಜಯಂತಿ: ರಾಮನಹಳ್ಳಿಯಲ್ಲಿ ಗೌರಿ ಸೇವಾ ಟ್ರಸ್ಟ್ ಪದಾಧಿಕಾರಿಗಳಿಂದ ಅರ್ಥಪೂರ್ಣ ಆಚರಣೆ…

33
firstsuddi

ಚಿಕ್ಕಮಗಳೂರು:- ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ನಗರದ ರಾಮನಹಳ್ಳಿಯಲ್ಲಿ ಗೌರಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ನಿನ್ನೆ ಅರ್ಥಪೂರ್ಣವಾಗಿ ಆಚರಿಸಿದರು.

ಜನ್ಮದಿನದ ಪ್ರಯುಕ್ತ ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಸಾಮೂಹಿಕವಾಗಿ ಪುಷ್ಪ ನಮನ ಸಲ್ಲಿಸಿದರು ಈ ವೇಳೆ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಸೇರಿದಂತೆ ವಿವಿಧ ಶೈಕ್ಷಣಿಕ ಪರಿಕರಗಳನ್ನು ಟ್ರಸ್ಟ್ ನಿಂದ ವಿತರಿಸಲಾಯಿತು.

ವಿದ್ಯಾರ್ಥಿಗಳ ಶಿಕ್ಷಣದ ವೆಚ್ಚವನ್ನು ಟ್ರಸ್ಟ್ ನಿಂದ ಭರಿಸುವ ನಿಟ್ಟಿನಲ್ಲಿ ಐವರು ಬಡ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಮನಹಳ್ಳಿ ಗಿರಿ ಗಂಗೋತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಲ್ ಜಿ ಪರಮೇಶ್ವರಪ್ಪ, ಈ ವರ್ಷದಿಂದ ಶಾಲೆಯಲ್ಲಿ ಎಲ್ ಕೆ ಜಿ. ಯು ಕೆ ಜಿ ತರಗತಿಗಳನ್ನು ಆರಂಭಿಸಲಿದ್ದು ಸುತ್ತಮುತ್ತಲ ನಿವಾಸಿಗಳು ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಮನವಿ ಮಾಡಿದರು.

ಗೌರಿ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಟ್ರಸ್ಟ್ ವತಿಯಿಂದ ಐವರು ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಸೇರಿದಂತೆ ಅವರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸಲಾಗುವುದು ಎಂದು ತಿಳಿಸಿದರು.

ಗೌರಿ ಸೇವಾ ಟ್ರಸ್ಟ್ ನ ಅಧ್ಯಕ್ಷೆ ಲತಾ ರವಿಕುಮಾರ್, ಗೌರವಾಧ್ಯಕ್ಷ ರೇವಣ್ಣ, ಸಂಘಟನಾ ಕಾರ್ಯದರ್ಶಿ ಮುನ್ನಿ, ನಿರ್ದೇಶಕಿ ಶೃತಿ ಉಪಸ್ಥಿತರಿದ್ದರು.