ಮೈಸೂರು: ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ನಡೆದ ಗಲಾಟೆ ನೋಡ ನೋಡುತ್ತಲೇ ಕೋಮು ಘರ್ಷಣೆಯಾಗಿ ಮಾರ್ಪಟ್ಟಿದೆ. ಘರ್ಷಣೆಯ ಪರಿಣಾಮ ದುಷ್ಕರ್ಮಿಗಳು ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಲಾಗಿದೆ. ಘಟನೆಯಿಂದ ಇಡೀ ಗ್ರಾಮವೇ ಉದ್ವಿಗ್ನಗೊಂಡಿದೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪರಿಸ್ಥಿತಿ ಸುಧಾರಿಸಲು ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆಯೂ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿ ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು, ಎಸ್ಪಿ ಸೀಮಾ ಲಾಟ್ಕರ್ ದೌಡಾಯಿಸಿದ್ದಾರೆ.
ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










