ಅಕಾಲಿಕ ಮಳೆಗೆ ಜಿಲ್ಲೆಯಲ್ಲಿ 436 ಮನೆಗಳು ಹಾನಿ, 5 ಲಕ್ಷ ರೂ. ಪರಿಹಾರದ ವ್ಯವಸ್ಥೆ : ಸಚಿವ ಸುಧಾಕರ್.

82
firstsuddi

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಅವರು, ಅಕಾಲಿಕ ಮಳೆಗೆ ಜಿಲ್ಲೆಯಲ್ಲಿ 436 ಮನೆಗಳಿಗೆ ಹಾನಿಯಾಗಿವೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರದ ವ್ಯವಸ್ಥೆ ಮಾಡಿಕೊಡಲಾಗುವುದು. ಮಳೆ ನೀರಿನಿಂದ ಬರುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದರು.

ಇನ್ನಾದರೂ ಜನ ಎಚ್ಚೆತ್ತುಕೊಳ್ಳಬೇಕು. ಮುಂದಿನ ಎರಡ್ಮೂರು ದಿನ ಮಳೆ ಇರುವುದರಿಂದ ಜಿಲ್ಲೆಯ ಸಮಸ್ಯೆಗಳ ಕುರಿತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜಕಾಲುವೆಗಳನ್ನ ಯಾರೇ ಒತ್ತುವರಿ ಮಾಡಿಕೊಂಡಿದ್ದರೆ ಮುಲಾಜಿಲ್ಲದೇ ತೆರವು ಮಾಡಬೇಕು ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ ನೀಡಿದ್ದಾರೆ.

50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿದೆ. ಅನೇಕ ಕೆರೆಗಳು ತುಂಬಿ ಹರಿದು ಬೆಳೆಗಳು ನಾಶವಾಗಿ ರೈತ ಸಮುದಾಯಕ್ಕೆ ನಷ್ಟವಾಗಿದೆ. ಈಗಾಗಲೇ ಮಳೆಗೆ ಮೂರು ಜನ ಕೊಚ್ಚಿ ಹೋಗಿದ್ದಾರೆ. ಮಳೆ ಆಪತ್ತನ್ನು ಎಲ್ಲರೂ ಒಗ್ಗಟ್ಟಗಾಗಿ ಎದುರಿಸೋಣ. ಜಿಲ್ಲಾಡಳಿತ ನಿಮ್ಮ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.