ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ.

23

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್‍ನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ 3 ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್‍ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ನಂತರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‍ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್‍ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಅನರುಲ್ ಶೇಖ್ ಕುರಿತು ಖಚಿತ ವರದಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಮೊದಲಿಗೆ ಮಹಮ್ಮದ್ ಮಾಣಿಕ್ ಎಂಬ ವ್ಯಕ್ತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದನು. ಆಗ ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು.