ಅಕ್ರಮ ಆಸ್ತಿ ಗಳಿಕೆ ಆರೋಪ – ರಾಜ್ಯಾದ್ಯಂತ ಏಕಕಾಲಕ್ಕೆ 60 ಕಡೆ ಎಸಿಬಿ ದಾಳಿ…

83
firstsuddi

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆ ಎಸಿಬಿ ಅಧಿಕಾರಿಗಳು ರಾಜ್ಯದ 60 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ15 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

15 ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ ಹಿನ್ನೆಲೆ, 8 ಜನ ಎಸಿಬಿ, 100 ಎಸ್ಪಿ, 300 ಜನ ಸಿಬ್ಬಂದಿ ಸೇರಿ ಒಟ್ಟು 408 ಮಂದಿ ದಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಕೆ.ಎಸ್ ಲಿಂಗೇಗೌಡ, ಎಕ್ಸಿಕ್ಯೂಟಿವ್ ಇಂಜಿನಿಯರ್ ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರು, ಶ್ರೀನಿವಾಸ್ ಕೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಎಲ್.ಬಿ.ಸಿ ಮಂಡ್ಯ, ಲಕ್ಷ್ಮಿಕಾಂತಯ್ಯ, ರೆವಿನ್ಯೂ ಇನ್ಸ್ ಪೆಕ್ಟರ್ ದೊಡ್ಡಬಳ್ಳಾಪುರ,ವಾಸುದೇವ್, ಪ್ರಾಜೆಕ್ಟ್ ಮ್ಯಾನೇಜರ್ ನಿರ್ಮಿತಿ ಕೇಂದ್ರ ಬೆಂಗಳೂರು, ಬಿ.ಕೃಷ್ಣಾರೆಡ್ಡಿ, ಜನರಲ್ ಮ್ಯಾನೇಜರ್, ನಂದಿನಿ ಡೈರಿ ಬೆಂಗಳೂರು, ಟಿ.ಎಸ್.ರುದ್ರೇಶಪ್ಪ, ಜಾಯಿಂಟ್ ಡೈರೆಕ್ಟರ್, ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಗದಗ, ಎ.ಕೆ.ಮಸ್ತಿ, ಕೋ ಆಪರೇಟಿವ್ ಡೆವಲಪ್ಮೆಂಟ್ ಆಫೀಸರ್, ಸವದತ್ತಿ ಡೆಪ್ಯೂಟೇಷನ್, ಬೈಲಹೊಂಗಲ, ಸದಾಶಿವ ಮರಲಿಂಗಣ್ಣನವರ್, ಸೀನಿಯರ್ ಮೋಟಾರ್ ಇನ್ಸ್ಪೆಕ್ಟರ್ ಗೋಕಾಕ್, ನಾತಾಜೀ ಹೀರಾಜಿ ಪಾಟೀಲ್, ಗ್ರೂಪ್ ಸಿ ಬೆಳಗಾಂ ಹೆಸ್ಕಾಂ, ಕೆ.ಎಸ್.ಶಿವಾನಂದ್, ರಿಟೈರ್ಡ್ ಸಬ್ ರಿಜಿಸ್ಟರ್, ಬಳ್ಳಾರಿ, ರಾಜಶೇಖರ್, ಫಿಜಿಯೋಥೆರಪಿಸ್ಟ್, ಯಲಹಂಕ ಸರ್ಕಾರಿ ಆಸ್ಪತ್ರೆ, ಮಾಯಣ್ಣ.ಎಂ, ಎಫ್.ಡಿ.ಸಿ ಬಿಬಿಎಂಪಿ ಬೆಂಗಳೂರು ರೋಡ್ಸ್ &ಇನ್ಫ್ರಾಸ್ಟ್ರಕ್ಚರ್, ಎಲ್.ಸಿ.ನಾಗರಾಜ್, ಸಕಾಲ, ಅಡ್ಮಿನಿಸ್ಟ್ರೇಷನ್ ಆಫಿಸರ್, ಬೆಂಗಳೂರು, ಜಿ.ವಿ.ಗಿರಿ, ಡಿ ಗ್ರೂಪ್ ಸಿಬ್ಬಂದಿ ಬಿಬಿಎಂಪಿ ಯಶವಂತಪುರ, ಜೇವರ್ಗಿ ಪಿಡಬ್ಲ್ಯೂಡಿ ಜೆಇ ಎಸ್ ಎಂ ಬಿರಾದರ್ ಮನೆ ಮೇಲೆ ದಾಳಿ ನಡೆದಿದೆ.