ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆ ಸಚಿವ ಜಮೀರ್ ಅಹ್ಮದ್‍ಗೆ ಲೋಕಾಯುಕ್ತ ಇಲಾಖೆಯಿಂದ ನೋಟಿಸ್.

32

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‍ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಡಿಸೆಂಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‍ಪಿ ನೋಟಿಸ್ ನೀಡಿದ್ದಾರೆ. ಇ.ಡಿ ದಾಳಿಯ ಬಳಿಕ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಲೋಕಾಯುಕ್ತ ಇಲಾಖೆ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.