ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್. ಹರ್ಷ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಶಾಂತ್ ಶೆಟ್ಟಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಯುಕ್ತ ಹರ್ಷ “ಪ್ರಶಾಂತ್ ಶೆಟ್ಟಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಬಗ್ಗೆ ಸಾಕಷ್ಡು ದೂರುಗಳು ಬಂದಿತ್ತು. ಅದಕ್ಕಾಗಿ ಅಮಾನತುಗೊಳಿಸಿ ವಿಚಾರಣೆ ಮಾಡಲಾಗುವುದು. ಯಾರೇ ಆಗಲಿ, ಕಾನೂನು ಮೀರಿ ವರ್ತಿಸಿದರೆ ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.










