ಅಕ್ರಮ ಮರಳು ಗಣಿಗಾರಿಕೆ ತಪಾಸಣೆ ವೇಳೆ ಮಹಿಳಾ ಅಧಿಕಾರಿ ಮೇಲೆ ಹಲ್ಲೆ…

41
firstsuddi

ಬಿಹಾರ: ಅಕ್ರಮ ಮರಳು ಗಣಿಗಾರಿಕೆ ತಪಾಸಣೆ ವೇಳೆ ಮಹಿಳಾ ಅಧಿಕಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಪಾಟ್ನಾ ಬಳಿಯ ಬಿಹ್ತಾ ಎಂಬಲ್ಲಿ ನಡೆದಿದೆ.

ಬಿಹ್ತಾ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸುವ ಕಾರ್ಯಾಚರಣೆಯ ಭಾಗವಾಗಿ ತಂಡವೊಂದು ತಪಾಸಣೆ ಮತ್ತು ಶೋಧನೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ.

ಅಕ್ರಮ ಮರಳು ಗಣಿಗಾರಿಕೆ ತಡೆಗೆ ನಡೆಸಿದ ತಪಾಸಣೆ ವೇಳೆ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ದುಷ್ಕರ್ಮಿಗಳ ಗುಂಪೊಂದು ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು 44 ಮಂದಿಯನ್ನು ಬಂಧಿಸಿ, ಮೂವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.