ಅಕ್ರಮ ಸಂಬಂಧ ಶಂಕೆ : ಪತ್ನಿಯನ್ನೇ ಕೊಂದ ಪತಿ ಮಹಾಶಯ!

112
firstsuddi

ಬೆಂಗಳೂರು : ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಸಹ ಗಲಾಟೆಯಾಗಿದೆ. ಅಲ್ಲದೇ ಮಣಿ ಇತ್ತೀಚೆಗೆ ಮದ್ಯ ದಾಸನಾಗಿದ್ದ. ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಗಲಾಟೆ ಮಾಡುತ್ತಿದ್ದ ಎನ್ನಲಾಗ್ತಿದೆ.

ಇಂದು ಬೆಳಗಿನ ಜಾವ ಪತ್ನಿ ಮಲಗಿದ್ದಾಗ ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾನೆ. ಬೆಳಗ್ಗೆಯಾದರೂ ಆಶಾ ಮನೆಯಿಂದ ಹೊರ ಬರದ ಹಿನ್ನೆಲೆ ಅಕ್ಕಪಕ್ಕದ ಮನೆಯವರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರು ಹುಳಿಮಾವು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿ ಮಣಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.