ಅಕ್ರಮ ಸಂಬಂಧ – ಸುಪಾರಿ ಕೊಟ್ಟು ಪ್ರಿಯಕರನನ್ನೇ ಮುಗಿಸಿದ್ಲು…

74
firstsuddi

ನೆಲಮಂಗಲ : ಮತ್ತೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯತಮೆ ತನ್ನ ಪ್ರಿಯಕರನನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ.

ಸೆಪ್ಟೆಂಬರ್ 5 ರಂದು ಮಾದಾವರದ ನವಿಲೇ ಲೇಔಟ್ ನ ನಿರ್ಜನ ಪ್ರದೇಶದಲ್ಲಿ ಕಿಡಿಗೇಡಿಗಳು ಕಿರಣ್ ಕುಮಾರ್ ನನ್ನು ಕುತ್ತಿಗೆ, ಎದೆಗೆ ಚುಚ್ಚಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಬೆಂಗಳೂರಿನ ಪ್ರಕ್ರಿಯ ಆಸ್ಪತ್ರೆಯಲ್ಲಿ ಕಿರಣ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಪ್ರಕರಣ ದಾಖಲಿಸಿಕೊಂಡ ಮಾದನಾಯಕನಹಳ್ಳಿ ಪೊಲೀಸರು 4 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ 5 ವರ್ಷಗಳಿಂದ ಶ್ವೇತಾ ಮತ್ತು ಕಿರಣ್ ಕುಮಾರ್ ಪ್ರೀತಿಸುತ್ತಿದ್ದರು. ಆದರೆ, ಈ ಮಧ್ಯೆ ಡೇವಿಡ್ ಎಂಬಾತ ಪರಿಚಯವಾಗಿದ್ದು, ಶ್ವೇತಾ ಡೇವಿಡ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಆದರೆ, ಶ್ವೇತಾ ಮತ್ತು ಡೇವಿಡ್ ಜೊತೆಯಾಗಿರಲು ಕಿರಣ್ ಕುಮಾರ್ ಮುಳುವಾಗಿದ್ದ ಎಂಬ ಕಾರಣದಿಂದ ಸುಪಾರಿ ಕೊಟ್ಟು ಕಿರಣ್ ಕೊಲೆ ಮಾಡಲು ಇಬ್ಬರೂ ಸೇರಿ ಯೋಜನೆ ರೂಪಿಸಿದ್ದರು.

ಕೊಲೆಗೆ ಸ್ಕೆಚ್ ಹಾಕಿದ ಡೇವಿಡ್ ಶ್ರೀಕಾಂತ್ ಮತ್ತು ದಿನೇಶ್ ಜೊತೆ ಸೇರಿ 1 ಲಕ್ಷ ರೂಪಾಯಿಗೆ ಡೀಲ್ ಮಾತನಾಡಿಕೊಂಡು 10 ಸಾವಿರ ಹಣ ನೀಡಿ ತನ್ನ ಬೈಕ್ ಕೊಟ್ಟು ಕಿರಣ್ ಮೇಲೆ ಅಟ್ಯಾಕ್ ಮಾಡಿಸಿದ್ದ. ಈ ಕೊಲೆಗೆ ಕಿರಣ್ ಕುಮಾರ್ ಚಲನವಲನದ ಬಗ್ಗೆ ಸಂಪೂರ್ಣ ಅರಿತಿದ್ದ ಶ್ವೇತಾ ಎಲ್ಲಾ ಮಾಹಿತಿಗಳನ್ನು ನೀಡಿದ್ದಳು.

ಪ್ರಕರಣ ದಾಖಲಿಸಿಕೊಂಡಿದ್ದ ಮಾದನಾಯಕನಹಳ್ಳಿ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಸಿಸಿಟಿವಿಯಲ್ಲಿ ಬೈಕ್ ಚಲನವಲನ ಆಧರಿಸಿ ತನಿಖೆ ನಡೆಸಿತ್ತು. ಬಳಿಕ ಯುವತಿ ಶ್ವೇತಾಳನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯದ ಅಸಲಿಯತ್ತು ಹೊರ ಬಿದ್ದಿದೆ. ಪ್ರಕರಣ ಸಂಬಂಧ ನಾಲ್ವರನ್ನೂ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಬೈಕ್, ಚಾಕು ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.