ಲಖನೌ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಕ್ಷದ 111 ಶಾಸಕರು ಅಖಿಲೇಶ್ ಯಾದವ್ ಅವರನ್ನು ಸಮಾಜವಾದಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ಪ್ರಸ್ತಾಪಿಸಬಹುದಾದ ವಿಷಯಗಳ ಕುರಿತು ಚರ್ಚಿಸಲು ಯಾದವ್ ಅವರು ಸಮಾಜವಾದಿ ಪಕ್ಷದ ಮಿತ್ರಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಮೊದಲ ಬಾರಿಗೆ ಯಾದವ್, ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಕುಟುಂಬದ ಭದ್ರಕೋಟೆಯಾದ ಕರ್ಹಾಲ್ ನಿಂದ ಶಾಸಕರಾಗಿ ಆಯ್ಕೆಯಾದ ನಂತರ ಅಜಮ್ ಗಢ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.










