ನವದೆಹಲಿ : ಇಂದು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. ಅದರ ಅಂಗವಾಗಿ ರಾಜಧಾನಿಯಲ್ಲಿರುವ ಸದೈವ್ ಅಟಲ್ ಸ್ಮಾರಕ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಇತರ ಪ್ರಮುಖ ನಾಯಕರು ಅವರಿಗೆ ಗೌರವ ನಮನ ಸಲ್ಲಿಸಿದರು.
ವಾಜಪೇಯಿ ಅವರು ಮೂರು ಬಾರಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ದೀರ್ಘಕಾಲದ ಅನಾರೋಗ್ಯದ ನಂತರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ನಲ್ಲಿ ಆಗಸ್ಟ್ 16, 2018 ರಂದು ವಾಜಪೇಯಿ ಅವರು ನಿಧನರಾಗಿದ್ದರು.










