ಅಡ್ಡ ಮತದಾನ: ಶಾಸಕ ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಪ್ರತಿಭಟನೆ…

60
firstsuddi

ತುಮಕೂರು : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ ತುಮಕೂರಿನ ವಿದ್ಯಾನಗರದಲ್ಲಿರುವ ಶಾಸಕ ಶ್ರೀನಿವಾಸ್ ಅವರ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ನೇತೃತ್ವದಲ್ಲಿ ಶಾಸಕ ಶ್ರೀನಿವಾಸ್ ಮನೆ ಮುಂದೆ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.