ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ : ಬಿಎಸ್‍ವೈ ಗೆ ಹೆಚ್‍ಡಿಕೆ ತಿರುಗೇಟು…

350
firstsuddi

ಬೆಂಗಳೂರು : ಮೂರುವರೆ ವರ್ಷ ನಾನೇ ಸಿಎಂ ಕುಮಾರಸ್ವಾಮಿ ಅಡ್ರೆಸ್‍ಗೆ ಇಲ್ಲದಂತಾಗಿದೆ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. ಟ್ವಿಟರ್‍ನಲ್ಲಿ- ‘ಮೂರೂವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್ಗೆ ಇಲ್ಲದಂತಾಗಿದ್ದಾರೆ’ ಎಂದಿದ್ದಾರೆ ಬಿಎಸ್ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ? ನನ್ನ ಅಡ್ರೆಸ್ ಬಗ್ಗೆ ನೀವು ಮಾತನಾಡಿದ್ದೀರಿ ಬಿಎಸ್ವೈ. ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ. ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್‘ ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ. ಅಧಿಕಾರದ ಅಮಲು ನಿಮ್ಮ ಮೂಲಕ ಏನೇನನ್ನೋ ಹೇಳಿಸುತ್ತಿದೆ. ಅಂಕುಶವಿಲ್ಲದಂತಿದ್ದ ಬಿಳಿಯರ ಸಾಮ್ರಾಜ್ಯವನ್ನೇ ಈ ಜನ ಅಂತ್ಯಗೊಳಿಸಿದ್ದಾರೆ. ಸಣ್ಣ ಪ್ರಾಂತ್ಯವನ್ನು ಮುನ್ನಡೆಸಿದರೂ, ಉತ್ತಮ ಆಡಳಿತ ನೀಡಿದ ಕೆಂಪೇಗೌಡರ ಪ್ರಾಂತ್ಯವೂ ಇದೇ ನೆಲದಲ್ಲೇ ಅಳಿದಿದೆ. ಆದರೆ, ಇಲ್ಲಿ ಉಳಿದಿದ್ದು ಹೆಸರು. ನಿಮ್ಮ– ನಿಮ್ಮ ವಿಚಾರದಲ್ಲೂ ಇದು ಅನ್ವಯ. ಅಧಿಕಾರದ ಮದದಲ್ಲಿ ಆಣೆಗಳನ್ನಿಟ್ಟವರನ್ನೇ ನಮ್ಮ ಜನ ಬಿಟ್ಟಿಲ್ಲ. ಅವರಿಗೆ ನನ್ನ ಅಡ್ರೆಸ್ ತೋರಿಸಿದ್ದಾರೆ. ಇನ್ನು ನೀವು ಅಡ್ರೆಸ್ ಕೇಳಿದಾಗ್ಯೂ ಜನ ನನ್ನ ಅಡ್ರೆಸ್ ತೋರಿಸದೇ ಬಿಟ್ಟಾರೆಯೇ? ಎಚ್ಚರದಿಂದಿರಿ ಎಂದು ಟ್ವೀಟ್ ಮಾಡಿದ್ದಾರೆ.