ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ತುರ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ : ರಮೇಶ್ ಕುಮಾರ್…

353
firstsuddi

ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜಿನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ತುರ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ. ನೀತಿ ನಿಯಮದ ಪ್ರಕಾರ ಶಾಸಕರು ಖುದ್ದಾಗಿ ನನ್ನನ್ನು ಭೇಟಿಯಾಗಿ ರಾಜೀನಾಮೆ ನೀಡಬೇಕು ಹಾಗೂ ನಾನು ಎಲ್ಲಾ ಶಾಸಕರನ್ನೂ ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದು, ಸ್ಪೀಕರ್ ಅವರ ನಿರ್ಧಾರಕ್ಕೆ ಪ್ರತಿಕ್ರಯಿಸಿದ ಅತೃಪ್ತ ಶಾಸಕರು ನಾವು ಸ್ಪೀಕರ್ ಅವರ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಅವರು ನಮ್ಮನ್ನು ಮಾತನಾಡಲು ಕರೆದ ಕೂಡಲೇ ವಾಪಾಸ್ ಬರುತ್ತೇವೆ. ಸ್ಪೀಕರ್ ಅವರ ಮೇಲೆ ನಮಗೆ ಗೌರವವಿದೆ, ನಮ್ಮ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ ಎಂದು ತಿಳಿಸಿದ್ದಾರೆ.