ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಇಂದು ನಡೆದ ವಾದ-ಪ್ರತಿವಾದದ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿದ್ದು, ನಾಳೆ ಬೆಳಿಗ್ಗೆ 10:30 ಕ್ಕೆ ತೀರ್ಪನ್ನು ಕೊಡುವುದಾಗಿ ತಿಳಿಸಿದ್ದು, ಹಾಗೂ ತೀರ್ಪು ನೀಡುವವರೆಗೂ ಯಥಾಸ್ಥಿತಿ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.










