ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲು ; ಗರ್ಭದಲ್ಲೇ ಭ್ರೂಣ ಸಾವು…

90
firstsuddi

ಕೊಟ್ಟಾಯಂ (ಕೇರಳ) : ಅತ್ಯಾಚಾರಕ್ಕೊಳಗಾಗಿದ್ದ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಳು. ತೀವ್ರ ರಕ್ತಸ್ರಾವವಾದ ಹಿನ್ನಲೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗರ್ಭದಲ್ಲೇ ಭ್ರೂಣ ಸಾವನ್ನಪ್ಪಿದೆ.

ಕೊಟ್ಟಾಯಂನ ಪಂಪಾಡಿ ಎಂಬಲ್ಲಿ ಘಟನೆ ನಡೆದಿದೆ. ಮಧ್ಯ ವಯಸ್ಸಿನ ವ್ಯಕ್ತಿಯೋರ್ವ ತನ್ನನ್ನು ಅಪಹರಿಸಿ, ಮಾದಕವಸ್ತು ನೀಡಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅತ್ಯಾಚಾರ ಆರೋಪಿಯನ್ನು ಸೆರೆ ಹಿಡಿಯಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಮೃತಪಟ್ಟ ಭ್ರೂಣದ ಡಿಎನ್ ಎ ಮಾದರಿ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಪರೀಕ್ಷೆಯ ಫಲಿತಾಂಶದ ನಂತರ ಮತ್ತಷ್ಟು ಮಾಹಿತಿ ಹೊರಬೀಳಲಿದೆ.