ಬೆಂಗಳೂರು : ಅತ್ಯಾಚಾರ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬೆಂಗಳೂರಿನ ಶ್ರೀರಾಮಪುರದಲ್ಲಿ ನಡೆದಿದೆ. ಚೆನ್ನೈ ಮೂಲದ ಆರೋಪಿ ದಿನೇಶ್ ಕಳೆದ 2 ದಿನಗಳ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಉತ್ತರ ವಿಭಾಗದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗಿನ ಜಾವ ಆರೋಪಿ ಶ್ರೀರಾಮಪುರ ಇನ್ಸ್ ಪೆಕ್ಟರ್ ಕಣ್ಣಿಗೆ ಬಿದ್ದಿದ್ದಾನೆ. ಬಳಿಕ ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಇನ್ಸ್ ಪೆಕ್ಟರ್ ಸುನೀಲ್ ಅವರು ಆರೋಪಿಯನ್ನು ಶರಣಾಗಲು ಸೂಚಿಸಿದ್ದರು. ಆದರೆ ಆರೋಪಿ ಶರಣಾಗದೆ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಇದರಿಂದ ಪೊಲೀಸರು ಆರೋಪಿ ದಿನೇಶ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದ್ದು, ಆರೋಪಿಗೆ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.










