ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್‍ನವರು ಹಿಂದೆ ಸರಿಯಲ್ಲ: ಪ್ರಹ್ಲಾದ್ ಜೋಶಿ ವಾಗ್ದಾಳಿ.

21

ಹುಬ್ಬಳ್ಳಿ: ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ಬೆಲೆಗಳು ಏರಿಕೆಯಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಕೆಎಸ್‍ಆರ್‍ಟಿಸಿ ಸಾರಿಕೆ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಸುಳ್ಳು ಗ್ಯಾರಂಟಿ ಕೊಟ್ಟಿತ್ತು. ಅದು ಈಗ ಹೊರಬರುತ್ತಿದೆ. ಉಚಿತ ವಿದ್ಯುತ್ ಎಂದು ಹೇಳಿದ್ದರು, ಈಗ ವಿದ್ಯುತ್ ಬೆಲೆ ಕೂಡ ಏರಿಕೆಯಾಗಿದೆ. ಕಾಕಾ ಸಾಹೇಬ್ ಪಾಟೀಲ್, ಮಹದೇವಪ್ಪ ನಿನಗೂ ಫ್ರೀ ಅಂತ ಹೇಳಿದ್ದರು. ಪೆಟ್ರೋಲ್, ಹಾಲು, ಡಿಸೇಲ್‍ಗೆ ಸೆಸ್ ಹಾಕಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ತಿ ನೋಂದಣಿ ಬೆಲೆ ಏರಿಕೆಯಾಗಿದೆ. ಮದ್ಯದ ಬೆಲೆ ಏರಿಕೆಯಾಗಿದೆ. ಈಗ ಸರ್ಕಾರ ಬಸ್ ಟಿಕೆಟ್ ಬೆಲೆ ಕೂಡ ಏರಿಕೆ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ. ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್‍ನವರು ಹಿಂದೆ ಸರಿಯಲ್ಲ. ಕಾಂಗ್ರೆಸ್‍ನವರು ಬರೀ ಸುಳ್ಳು ಹೇಳುತ್ತಾರೆ, ನಿರ್ಲಜ್ಜರು ಎಂದು ವಾಗ್ದಾಳಿ ನಡೆಸಿದರು. ಸಾರಿಗೆ ಸಂಸ್ಥೆ ಎರಡು ಸಾವಿರ ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲದಿದ್ದರಿಂದ, ಸಿಎಂ ಸಿದ್ದರಾಮಯ್ಯ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.