ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಣೆ…

73
firstsuddi

ವಾಷಿಂಗ್ಟನ್ : ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

2020ರ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧ ಸೋತಿದ್ದ ಡೊನಾಲ್ಡ್ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅಧ್ಯಕ್ಷೀಯ ಚುನಾವಣೆಗೆ ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ.