ಅನರ್ಹಗೊಂಡಿರುವ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ : ಸಂಜೀವ್ ಕುಮಾರ್.

360
firstsuddi

ಬೆಂಗಳೂರು : ಉಪ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರಿಗೆ ಸ್ಪರ್ಧಿಸುವ ಅವಕಾಶವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ತಿಳಿಸಿದರು. ಅ.21 ಕ್ಕೆ ಉಪ ಚುನಾವಣೆ ನಡೆಯಲಿದೆ ಎಂದು ಘೊಷಣೆಯಾಗುತ್ತಿದ್ದಂತೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅ.21ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಚುನಾವಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರು ಸ್ಪರ್ಧಿಸುವಂತಿಲ್ಲ. ಹಾಗೂ ಮಸ್ಕಿ ಮತ್ತು ಆರ್.ಆರ್. ನಗರ ಕ್ಷೇತ್ರಗಳ ವಿಚಾರದ ತಕರಾರು ಅರ್ಜಿಗಳು ನ್ಯಾಯಾಲಯದಲ್ಲಿ ಇರುವುದರಿಂದ ಎರಡು ಕ್ಷೇತ್ರಗಳ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.