ಅನರ್ಹ ಶಾಸಕರಿಗೆ ಭಾರಿ ಹಿನ್ನಡೆ, ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ಸುಪ್ರೀಂ…

174
firstsuddi

ನವದೆಹಲಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದ್ದು, ಹೀಗಾಗಿ ಅನರ್ಹ ಶಾಸಕರಿಗೆ ಭಾರಿ ಹಿನ್ನಡೆಯಾಗಿದೆ. ಇಂದು ಬೆಳಿಗ್ಗೆ ನ್ಯಾ. ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಆದರೆ ಕರ್ನಾಟಕ ಮೂಲದ ನ್ಯಾ. ಮೋಹನ್ ಶಾಂತನಗೌಡ ಅವರು ಈ ವಿಚಾರಣೆಯಿಂದ ಹಿಂದೆ ಸರಿದ ಕಾರಣ ಅರ್ಜಿ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎನ್ನಲಾಗಿದೆ.