ಅನಾರೋಗ್ಯದಿಂದ ಬಳಲುತ್ತಿದ್ದ ಬಾಗಲಕೋಟೆ ಮೂಲದ ಸಿ ಆರ್ ಪಿ ಎಫ್ ಯೋಧ ಸಾವು…

238
firstsuddi

ಬಾಗಲಕೋಟೆ : ಅನಾರೋಗ್ಯದಿಂದ ಬಳಲುತ್ತಿದ್ದ ಸಿ ಆರ್ ಪಿ ಎಫ್ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಿರೇಬೂದಿಹಾಳ ಗ್ರಾಮದ ರಂಗಪ್ಪ ಬೀಮಪ್ಪ ಬಡಿಗೇರ್(39) ಮೃತ ಯೋಧರು ಎನ್ನಲಾಗಿದ್ದು, ಯೋಧ ರಂಗಪ್ಪ ಅವರು ಕಳೆದ 19ವರ್ಷದಿಂದ ಸಿ ಆರ್ ಪಿ ಎಫ್ ನ ಒಡಿಶಾದ 4ನೇ ಬೆಟಾಲಿಯನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಒಡಿಶಾದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಂಗಪ್ಪ ಅವರು ನಿನ್ನೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದು, ಇಂದು ಅವರ ಅಂತ್ಯಸಂಸ್ಕಾರ ಹಿರೇಬೂದಿಹಾಳ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.