ಪೇಜಾವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು…

225
firstsuddi

ಉಡುಪಿ: ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಗುರುವಾರ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಪೇಜಾವರ ಸ್ವಾಮೀಜಿಗಳಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ವಾಮೀಜಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.