ಹಾಸನ : ಅನೈತಿಕ ಸಂಬಂಧ ಹಿನ್ನಲೆ ತನ್ನ ಪತಿಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾವಲುಹೊಸೂರು ಗ್ರಾಮದ ಬಳಿ ನಡೆದಿದೆ.
ಕಾವಲುಹೊಸೂರು ಗ್ರಾಮದ ನಿವಾಸಿಯಾದ ಆನಂದ್ ಕುಮಾರ್(42) ಪತ್ನಿಯಿಂದಲೇ ಕೊಲೆಯಾದ ದುರ್ದೈವಿ. ಪತ್ನಿ ಸುನಿತಾ, ಆಕೆಯ ಪ್ರಿಯಕರ ಹಾಗೂ ಇಬ್ಬರು ಹಂತಕರನ್ನು ಈಗಾಗಲೇ ಬಂಧಿಸಲಾಗಿದೆ.
ಜನವರಿ 31ರಂದು ಮಕ್ಕಳನ್ನು ಶಾಲೆಯಿಂದ ಕರೆತರಲು ಹೊರಟಿದ್ದ ವೇಳೆ ರಸ್ತೆ ಮಧ್ಯೆ ಆನಂದ್ ಬೈಕ್ ಅಡ್ಡಗಟ್ಟಿ ಅಪರಿಚಿತ ವ್ಯಕ್ತಿ ಕೊಲೆ ಮಾಡಿ ಪರಾರಿಯಾಗಿದ್ದನು. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಪತ್ತೆಹಚ್ಚುವಲ್ಲಿ ಹರಸಾಹಸಪಟ್ಟಿದ್ದರು. ಈ ವೇಳೆ, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ.
ಪತಿ ಆನಂದ್ ಮತ್ತು ಸುನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಯೋಗ ತರಬೇತಿಗೆ ಸೇರಿದ ಸುನಿತಾ ಯೋಗ ತರಬೇತಿ ಕ್ಲಾಸ್ ನಲ್ಲಿ ಪರಿಚಯವಾಗಿದ್ದ ನವೀನ ಜೊತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದಳು. ಅಕ್ರಮ ಸಂಬಂಧದ ವಿಚಾರ ಗಂಡನಿಗೆ ಗೊತ್ತಾಗುತ್ತಿದ್ದಂತೆ ಇದಕ್ಕೆ ಆಡ್ಡಿಯಾಗುತ್ತಾನೆಂದು ತಿಳಿದು ತನ್ನ ಪ್ರಿಯಕರ ನವೀನ್ ಜೊತೆ ಸೇರಿಕೊಂಡು ಸುಪಾರಿ ಕೊಟ್ಟು ಆತನನ್ನು ಕೊಲೆ ಮಾಡಿಸಿದ್ದಳು. ಇದೀಗ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.










