ಚಿಕ್ಕಬಳ್ಳಾಪುರ : ಅನ್ಯಜಾತಿ ಯುವಕನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆ ವಿಷ ಸೇವಿಸಿ ತಂದೆ, ತಾಯಿ ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ಶ್ರೀರಾಮಪ್ಪ (65), ಸರೋಜಮ್ಮ (60) ಮಗ ಮನೋಜ್ (24) ಆತ್ಮಹತ್ಯೆಗೆ ಶರಣಾದವರು. ಅಂದಹಾಗೆ ಶ್ರೀರಾಮಪ್ಪ-ಸರೋಜಮ್ಮ ದಂಪತಿಯ ಮಗಳು ಅರ್ಚನಾ ಅನ್ಯ ಜಾತಿ ಯುವಕ ನಾರಾಯಣಸ್ವಾಮಿ ಎಂಬಾತನ ಜೊತೆ ನಾಪತ್ತೆಯಾಗಿದ್ದಾಳೆ ಎನ್ನಲಾಗಿದ್ದು, ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ನಿನ್ನೆಯಷ್ಟೇ ಪೋಷಕರು ದೂರು ನೀಡಿದ್ದರು. ಇದೇ ವಿಚಾರದಲ್ಲಿ ಮನನೊಂದಿದ್ದ ತಂದೆ, ತಾಯಿ ಹಾಗೂ ಮಗ ತಡರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










