ಅಪಘಾತಕ್ಕೀಡಾದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು.

46
firstsuddi

ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯದ್ಧಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ ಕೀವ್ ನ ಖಾರ್ಕಿವ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಝೆಲೆನ್ಸ್ಕಿ ವಕ್ತಾರರಾದ ಸೆರ್ಹಿ ನೈಕಿಫೊರೊವ್ ಉಕ್ರೇನ್ ಅಧ್ಯಕ್ಷರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಝೆಲೆನ್ಸ್ಕಿ ಕಾರು ಚಾಲಕನಿಗೆ ಸಹ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ.