ಪಾಟ್ನಾ: 2014ರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಕಾರ್ತಿಕ್ ಕುಮಾರ್ ನಿನ್ನೆ ರಾತ್ರಿ ರಾಜೀನಾಮೆ ನೀಡಿದರು. ಅವರ ರಾಜೀನಾಮೆಯನ್ನು ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅಂಗೀಕರಿಸಿದ್ದಾರೆ.
ನೂತನವಾಗಿ ಅಧಿಕಾರಕ್ಕೆ ಬಂದ ನಿತೀಶ್ ಕುಮಾರ್ ಸರ್ಕಾರದಲ್ಲಿ ರಾಜ್ಯದ ಕಾನೂನು ಸಚಿವರಾಗಿದ್ದ ಆರ್‌ಜೆಡಿ ಎಂಎಲ್ ಸಿ ಕಾರ್ತಿಕ್ ಕುಮಾರ್ ಅವರ ಖಾತೆಯನ್ನು ಬದಲಾಯಿಸಿ ನಿನ್ನೆ ರಾತ್ರಿ ಕಬ್ಬು ಇಲಾಖೆಯನ್ನು ವಹಿಸಲಾಗಿತ್ತು. ಇದಾಗಿ ಕೆಲವೇ ಗಂಟೆಗಳ ನಂತರ ಅವರು ರಾಜೀನಾಮೆ ನೀಡಿದರು.
ಶಮೀಮ್ ಅಹ್ಮದ್ ಅವರನ್ನು ರಾಜ್ಯ ಕಾನೂನು ಸಚಿವರನ್ನಾಗಿ ನೇಮಿಸಲಾಗಿದ್ದು, ಕಂದಾಯ ಮತ್ತು ಭೂ ಸುಧಾರಣಾ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.










