ಅಪ್ಪು ಎಂಟ್ರಿ ಆಗುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿ.. ಸೇನಾ ಸಮವಸ್ತ್ರದಲ್ಲೇ ಚಿತ್ರಮಂದಿರಕ್ಕೆ ಆಗಮಿಸಿದ ನಿವೃತ್ತ ಯೋಧ.

73
firstsuddi

ಕಲಬುರಗಿ/ಬೆಳಗಾವಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಕೊನೆ ಚಿತ್ರ ಜೇಮ್ಸ್ ಇಂದು ತೆರೆ ಕಂಡಿದೆ. ಬೆಳಗಾವಿಯಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ನೋಡಲು ನಿವೃತ್ತ ಯೋಧರೊಬ್ಬರು ಸೇನಾ ಸಮವಸ್ತ್ರದಲ್ಲೇ ಆಗಮಿಸಿದ್ದರೆ, ಇತ್ತ ಕಲಬುರಗಿಯಲ್ಲಿ ಅಭಿಮಾನಿಯೊಬ್ಬ ಸಿನಿಮಾ ನೋಡುತ್ತಲೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ನಿವಾಸಿ ನಿವೃತ್ತ ಯೋಧ ವಿನಾಯಕ ಮೇದಾರ್ ಸೇನಾ ಸಮವಸ್ತ್ರದಲ್ಲೇ ನಗರದ ಚಿತ್ರಾ ಚಿತ್ರಮಂದಿರಕ್ಕೆ ಆಗಮಿಸಿದ್ದರು. ಈ ವೇಳೆ ಕೇಕ್ ಕತ್ತರಿಸಿ ಅಪ್ಪು ಹುಟ್ಟುಹಬ್ಬ ಆಚರಿಸಿದರು. ವಿನಾಯಕ ಅವರು ಭಾರತೀಯ ಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿದ್ದಾರೆ. ಇವರು ಪುನೀತ್ ಅಪ್ಪಟ ಅಭಿಮಾನಿಯಾಗಿದ್ದಾರೆ.

ಕಲಬುರಗಿ: ನಗರದ ಸಂಗಮ ಚಿತ್ರಮಂದಿರದಲ್ಲಿ ಅಭಿಮಾನಿಯೊಬ್ಬರು ಸಿನಿಮಾ ನೋಡುತ್ತಲೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಜೇಮ್ಸ್ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಎಂಟ್ರಿ ಆಗುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತು ಭಾವುಕರಾದರು. ಅಳುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನೂ ಅನೇಕರು ಸಿನಿಮಾ ನೋಡಿ ಹೊರಬರುವಾಗ ಕಣ್ಣೀರು ಹಾಕಿದ್ದಾರೆ.