ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ…

70
firstsuddi

ಕೊಪ್ಪಳ : ಅಪ್ರಾಪ್ತೆಯನ್ನ ಮರುಳು ಮಾಡಿ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ತಾಲೂಕಿನ ಗ್ರಾಮವೊಂದರಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಮರುಳುಮಾಡಿ ಅತ್ಯಾಚಾರ ಎಸಗಿದ್ದ. ಜೊತೆಗೆ ಅತ್ಯಾಚಾರ ಮಾಡಿರುವುದನ್ನು ವಿಡಿಯೋ ಮಾಡಿಕೊಂಡು, ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಲಕಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ.

ಗುರುವಾರ ಅಪ್ರಾಪ್ತೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿ ಪೋಷಕರು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.