ಅಪ್ರಾಪ್ತೆ ಮೇಲೆ ಅತ್ಯಾಚಾರ – ಇಬ್ಬರು ಆರೋಪಿಗಳು ಅರೆಸ್ಟ್…

101
firstsuddi

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆ ಗರ್ಭಿಣಿಯಾದ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂಬುವರು ಬಂಧಿತ ಆರೋಪಿಗಳು. ಬೆಳ್ತಂಗಡಿ ತಾಲ್ಲೂಕಿನ ಗ್ರಾಮವೊಂದರ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಇವರಿಬ್ಬರು ಅತ್ಯಾಚಾರವೆಸಗಿದ್ದಾರೆ.

ಸೆ.27ರಂದು ಲಸಿಕೆ ಪಡೆಯುವಾಗ ಬಾಲಕಿಯ ದೇಹಸ್ಥಿತಿ ಗಮನಿಸಿದ ವೈದ್ಯರು, ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಅಪ್ರಾಪ್ತೆಯು ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.