ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ- 56 ವರ್ಷದ ವೃದ್ಧ ಅರೆಸ್ಟ್…

49
firstsuddi

ರಾಮನಗರ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೃದ್ಧನೊಬ್ಬನನ್ನು ಮಾಗಡಿ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ಮೂಲದ ಬೆಟ್ಟೇಗೌಡ(56) ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿ. ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದರ ಹಿನ್ನೆಲೆ ಬಾಲಕಿ ಆರೋಗ್ಯದಲ್ಲಿ ಏರುಪೇರು ಆಗಿದೆ. ಈ ಹಿನ್ನೆಲೆ ಅನುಮಾನಗೊಂಡ ಮಗುವಿನ ಪೋಷಕರು ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ತಪಾಸಣೆ ನಡೆಸಿದ ವೈದ್ಯರು ಬಾಲಕಿ ಗರ್ಭಿಣಿಯಾಗಿರುವುದನ್ನು ಖಚಿತ ಪಡಿಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಸದ್ಯ ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.