ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಆರು ಮಂದಿ ಅಪ್ರಾಪ್ತರು ಪೊಲೀಸ್ ವಶಕ್ಕೆ…

84
firstsuddi

ಧಾರವಾಡ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು 17 ವರ್ಷದ ಆರು ಬಾಲಕರನ್ನು ನಿನ್ನೆ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಹೊರವಲಯಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾಗಿದೆ. ಅಲ್ಲದೇ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ವಿಡಿಯೋ ಭಯದಿಂದ ಬಾಲಕಿ ಯಾರ ಬಳಿಯೂ ಈ ಬಗ್ಗೆ ಹೇಳಿಕೊಂಡಿರಲಿಲ್ಲ. ಆದರೆ ಅತ್ಯಾಚಾರದ ವಿಡಿಯೋ ಇದೀಗ ವೈರಲ್ ಆಗಿದೆ. ಹೀಗಾಗಿ ಬಾಲಕಿ ಇದೀಗ ಪೊಲೀಸರ ಮೊರೆ ಹೋಗಿದ್ದಾಳೆ. ಪ್ರಸ್ತುತ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ ಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಅತ್ಯಾಚಾರ ಎಸಗಿದವರು ಸಹ ಅಪ್ರಾಪ್ತರಾಗಿದ್ದು, ಈ ಕಾರಣದಿಂದ ಪೊಲೀಸರು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂಬ ಮಾಹಿತಿಯಿದೆ. ಧಾರವಾಡ ಶಹರ ಠಾಣೆ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.