ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಸ್ ಚಾಲಕನೋರ್ವನನ್ನು ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಾಗಲಕೋಟೆ ಮೂಲದ ದಯಾನಂದ (32 ) ಎಂದು ಗುರುತಿಸಲಾಗಿದ್ದು, ಆರೋಪಿ ದಯಾನಂದ ನಗರದಲ್ಲಿ ಬಸ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈತ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಅನ್ವಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.










