ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ – ಹೆಡ್ ಕಾನ್ಸ್ ಟೇಬಲ್ ಅಂದರ್…

80
firstsuddi

ಮಂಗಳೂರು : ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಠಾಣೆಯೊಂದರ ಹೆಡ್ ಕಾನ್ಸ್ ಟೇಬಲ್ ನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಜನವರಿ ತಿಂಗಳಲ್ಲಿ ಅಟೋ ಚಾಲಕನೊಬ್ಬ ಚುಡಾಯಿಸುತ್ತಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ಪೋಷಕರ ಜೊತೆ ದೂರು ನೀಡಲು ಬಂದಿದ್ದಳು. ಈ ಸಂದರ್ಭ ಬಾಲಕಿಯ ನಂಬರ್ ಪಡೆದುಕೊಂಡಿದ್ದ ಹೆಡ್ ಕಾನ್ ಸ್ಟೇಬಲ್ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.