ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ನಾಲ್ವರ ಬಂಧನ…

65
firstsuddi

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಫಿ ತೋಟದ ಮಾಲೀಕ ಸುದರ್ಶನ್, ಸ್ವಾಗತ್, ಪಾಪಣ್ಣ ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕೂಲಿ ಅರಸಿ ಬಂದು ತೋಟದ ಲೈನ್ ಮನೆಯಲ್ಲಿದ್ದ ಕಾರ್ಮಿಕನ ಮಗಳ ಮೇಲೆ ನಾಲ್ವರು ಕಿರಾತಕರು ನಿರಂತರ ಅತ್ಯಾಚಾರ ಎಸಗಿದ್ದಾರೆ.

ಬಾಲಕಿ ಅನಾರೋಗ್ಯದಿಂದ ಆಸ್ಪತ್ರೆಗೆ ಬಂದಾಗ ಗರ್ಭಿಣಿಯಾಗಿರುವ ವಿಚಾರ ತಿಳಿದು ಪರಿಶೀಲನೆ ನಡೆಸಿದಾಗ ಈ ಪೈಶಾಚಿಕ ಕೃತ್ಯ ಬಯಲಾಗಿದೆ. ಬಾಲಕಿಯನ್ನು ಪುಸಲಾಯಿಸಿ ಪಾಪಿಗಳು ಅತ್ಯಾಚಾರ ಎಸಗಿದ್ದಾರೆ. ನಾಲ್ವರ ವಿರುದ್ಧವೂ ಪೋಕ್ಸೋ ಸೇರಿ ವಿವಿಧ ಕಾನೂನಿನಡಿ ಕೇಸ್ ದಾಖಲಾಗಿದೆ.

ಸಂತ್ರಸ್ತ ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿ ಆಶ್ರಯ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಿಡಬ್ಲೂಸಿ ನೇತೃತ್ವದಲ್ಲಿ ದೂರು ನೀಡಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.