ಅಪ್ರಾಪ್ತ ಬಾಲಕಿ ಸೇರಿ ಇಬ್ಬರಿಗೆ ಲೈಂಗಿಕ ಕಿರುಕುಳ ; ಆರೋಪಿ ಅರೆಸ್ಟ್…

94
firstsuddi

ಮಂಗಳೂರು : ಅಪ್ರಾಪ್ತ ಬಾಲಕಿ ಸೇರಿದಂತೆ ಇಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಸಾರ್ವಜನಿಕರೇ ಪೊಲೀಸರಿಗೊಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಮಂಜೇಶ್ವರ ಹೊಸಬೆಟ್ಟು ನಿವಾಸಿ ಮುಸ್ತಫಾ ಬಂಧಿತ ಆರೋಪಿ. ಈತ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯ ತಚ್ಚನಿ ಎಂಬಲ್ಲಿ ಒಂಟಿಯಾಗಿ ಬರುತ್ತಿದ್ದ ಬಾಲಕಿಯನ್ನು ಮುಟ್ಟಿ ಕಿರುಕುಳ ನೀಡಿ ಪರಾರಿಯಾಗಿದ್ದ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಆರೋಪಿಯ ಗುರುತು ಪತ್ತೆ ಹಚ್ಚಿದ್ದರೂ, ಆರೋಪಿ ಸಿಕ್ಕಿರಲಿಲ್ಲ. ಆದರೆ ಮರುದಿನ 22 ವರ್ಷದ ಯುವತಿಯೊಬ್ಬಳು ಪೊಲೀಸ್ ಠಾಣೆಗೆ ಬಂದು ಇದೇ ಆರೋಪಿ ತನಗೂ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರು ನೀಡಿದ್ದಳು.

ಇಂದು ಆರೋಪಿ ಸ್ಕೂಟರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರೇ ದೇವಿಪುರದಲ್ಲಿ ತಡೆದು ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.