ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ – ಕಾಮುಕ ತಂದೆಗೆ 20 ವರ್ಷ ಶಿಕ್ಷೆ, 25 ಸಾವಿರ ರೂ. ದಂಡ…

50
firstsuddi

ಮಂಗಳೂರು : ತನ್ನ ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆಯೇ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ತಂದೆಗೆ 20 ವರ್ಷ ಕಠಿಣ ಶಿಕ್ಷೆ ಜೊತೆಗೆ 25 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿಟ್ಲದ ಪೆರುವಾಯಿ ಗ್ರಾಮದ ನಿವಾಸಿ ಶಿಕ್ಷೆಗೊಳಗಾದ ಅಪರಾಧಿ. 2020ರ ಮಾರ್ಚ್ ನಲ್ಲಿ ಈತ ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳ ಜೊತೆಗೆ ಕೂಲಂಕಷ ತನಿಖೆ ನಡೆಸಿದ್ದು, ಆರೋಪಿ ವಿರುದ್ಧದ ಅಪರಾಧ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಅವರು ಶಿಕ್ಷೆ ವಿಧಿಸಿಸಿದ್ದಾರೆ.