ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ- ಕಾಮುಕ ಶಿಕ್ಷಕನ ಬಂಧನ…

58
firstsuddi

ದಾವಣಗೆರೆ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನನ್ನು ಬಂಧಿಸಿರುವ ಘಟನೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ.

ವೈದ್ಯರಲ್ಲಿಗೆ ಬಾಲಕಿಯನ್ನು ಕರೆದುಕೊಂಡು ಹೋದಾಗ ಪರಿಶೀಲಿಸಿದ ವೈದ್ಯರು ಅತ್ಯಾಚಾರದ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೋಷಕರು ಪೋಲಿಸರಿಗೆ ತಿಳಿಸಿದ ಬೆನ್ನಲ್ಲೇ ಮಹಿಳಾ ಠಾಣೆಯ ಪೋಲಿಸರು ಅಪ್ರಾಪ್ತ ಬಾಲಕಿ ಹೇಳಿಕೆ ಪಡೆದು ಶಾಲೆಯಲ್ಲೇ ಶಿಕ್ಷಕನನ್ನು ಬಂಧಿಸಿದ್ದಾರೆ. ಆರೋಪಿ ಶಿಕ್ಷಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಆರೋಪಿ ಜೈಲು ಸೇರಿದ್ದಾನೆ. ಸದ್ಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.