ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ ನಾಲ್ವರು ರೋಗಿಗಳು ಸಾವು!

94
firstsuddi

ಕಲಬುರಗಿ : ಆಕ್ಸಿಜನ್ ಕೊರತೆಯಿಂದಾಗಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ನಿನ್ನೆಯಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇದ್ದು, ಇಂದು ಬೆಳಗಿನ ಜಾವ 4 ಗಂಟೆಗೆ ಆಕ್ಸಿಜನ್ ಖಾಲಿಯಾಗಿ ರೋಗಿಗಳು ನರಳಾಡುತ್ತಿದ್ದಾರೆ. ಸದ್ಯ 35 ರೋಗಿಗಳು ಚಿಕಿತ್ಸೆ ಪಡೆಯುತಿದ್ದು, ನಾಲ್ವರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಸಿರುವ ತಾಲ್ಲೂಕು ವೈದ್ಯಾಧಿಕಾರಿ ರತ್ನಾಕರ ತೋರಣ ಅವರು, ತಾಲೂಕಿನಲ್ಲಿ ಆಕ್ಸಿಜನ್ ಕೊರತೆ ಇದ್ದು, ಅಗತ್ಯಕ್ಕೆ ತಕ್ಕ ಆಕ್ಸಿಜನ್ ತರಲು ಸಾಧ್ಯವಾಗುತ್ತಿಲ್ಲ. ಜಿಲ್ಲಾಡಳಿತಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಆಕ್ಸಿಜನ್ ಸಿಲಿಂಡರ್ ಕಳಿಸಿಕೊಡುವುದಾಗಿ ತಿಳಿಸಿದ್ದಾರೆ. ಸಾವನ್ನಪ್ಪಿರುವ ನಾಲ್ವರು ಆಕ್ಸಿಜನ್ ಕೊರತೆಯಿಂದಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲು ಆಗಲ್ಲ. ಬೇರೆ ಬೇರೆ ಕಾರಣಗಳು ಇವೆ ಎಂದು ಹೇಳಿದ್ದಾರೆ.