ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ : ಜೋಶಿ.

76
firstsuddi

ಹುಬ್ಬಳ್ಳಿ : ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಅಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣ ಕೈವಶ ಮಾಡಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿ ಹತೋಟಿ ಮೀರಿದೆ. ಅಫ್ಘಾನಿಸ್ತಾನದಲ್ಲಿ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಏರ್ ಸ್ಪೇಸ್ ಅನ್ನು ಸಹ ಬಂದ್ ಮಾಡಲಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಭಾರತೀಯರನ್ನು ದೇಶಕ್ಕೆ ಕರೆತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮುಂದುವರಿಸಿದೆ. ಅಲ್ಲಿರುವ ಭಾರತದ ಪ್ರತಿಯೊಬ್ಬ ಪ್ರಜೆಯ ಬಗ್ಗೆಯೂ ನಮ್ಮ ಸರ್ಕಾರಕ್ಕೆ ಕಾಳಜಿ ಇದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯರ ರಕ್ಷಣೆಯ ಪ್ರಯತ್ನದಲ್ಲಿದ್ದೇವೆ. ಅಮೆರಿಕ ಸರ್ಕಾರ ಜನರ ರಕ್ಷಣೆ ಬಗ್ಗೆ ಕಾಳಜಿ ತೋರಬೇಕು ಎಂದಿದ್ದಾರೆ.